ರಾಜ್ಯ ಸರಕಾರದಿಂದಲೇ ನನಗೆ ಜೀವ ಬೆದರಿಕೆ ಇದೆ ಎಂದು ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನಹಳ್ಳಿ ಶಾಸಕರ ಜೊತೆ ಸಂಬಂಧವಿದೆ ಎಂದು ಪರೋಕ್ಷವಾಗಿ ಮಾಧ್ಯಮಗಳಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ತಮಗೆ ಸರಕಾರದಿಂದಲೇ ಜೀವ ಭಯ ಇದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಶಾಸಕ ಎಂ.ಪಿ.ರವೀಂದ್ರ ಹೆಸರು ಬಳಸದೇ ಪರೋಕ್ಷವಾಗಿ ಸರಕಾರವೇ ನನಗೆ ಜೀವ ಬೆದರಿಕೆ ಒಡ್ಡುತ್ತಿದೆ ಎಂದು ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಆರೋಪಿಸಿದ್ದಾರೆ.
ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ವಿಡಿಯೋ ಸಿಡಿಯನ್ನು ದೆಹಲಿಯಲ್ಲಿ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಬಿಡುಗಡೆಗೊಳಿಸಿದ್ದರು. ಸಚಿವರ ರಾಸಲೀಲೆ ಸಿಡಿ ಬಿಡುಗಡೆಯಾಗುತಿದ್ದಂತೆ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.