Publish Date: Mon, 16 Oct 2017 (18:24 IST)
Updated Date: Mon, 16 Oct 2017 (18:26 IST)
ಮುಂಬರುವ ಕೆಲ ದಿನಗಳಲ್ಲಿ ಯಾವ ಪಕ್ಷ ಸೇರುತ್ತೇನೆ ಎನ್ನುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಆಕ್ಟೋಬರ್ 22 ರಂದು ಬೆಂಬಲಿಗರ ಸಭೆ ಕರೆದಿದ್ದೇನೆ. ಸಭೆಯ ನಂತರ ಬಿಜೆಪಿ, ಅಥವಾ ಜನತಾ ದಳ ಸೇರುವ ಬಗ್ಗೆ ಘೋಷಿಸುತ್ತೇನೆ. ನನ್ನ ಕುಟುಂಬದವರು ಯಾರೂ ರಾಜಕೀಯಕ್ಕೆ ಬರೋಲ್ಲ. ರಾಜಕೀಯದಲ್ಲಿ ನನ್ನ ಕುಟುಂಬದವರಿಗೆ ಆಸಕ್ತಿಯಿಲ್ಲ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ನಡೆಯಿಂದಾಗಿ ಬೇಸತ್ತ ಯೋಗೇಶ್ವರ್, ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಹಿರಿಯ ಕಾಂಗ್ರೆಸ್ ಮುಖಂಡ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್, ತಮ್ಮನ್ನು ತುಳಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.
ಸಿ.ಪಿ. ಯೋಗೇಶ್ವರ್ ಯಾವ ಪಕ್ಷವನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎನ್ನುವ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.