ಬೆಂಗಳೂರು : ಅ.11ರೊಳಗೆ ಶಾಲೆ ಆರಂಭದ ಬಗ್ಗೆ ನಿರ್ಧಾರ ಮಾಡಿರುವುದಾಗಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಅಧಿಕಾರಿಗಳು, ತಜ್ಞರ ಜೊತೆ ಸಭೆ ನಡೆಸುತ್ತೇವೆ. ಪೋಷಕರ ಅಭಿಪ್ರಾಯ ಕೂಡ ಕೇಳಿದ್ದೇವೆ. ಶಾಲೆ ಆರಂಭಿಸುವ ವಿಚಾರದಲ್ಲಿ ಗೊಂದಲ ಬೇಡ. ಮಕ್ಕಳ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.