ಸಣ್ಣ ನೀರಾವರಿ ಇಲಾಖೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಬಜೆಟ್‌ಗಿಂತ ಮೂರು ಪಟ್ಟು ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದು, ತನ್ಮೂಲಕ 20 ಸಾವಿರ ಕೋಟಿ ರು.ಗೂ ಹೆಚ್ಚು ಬಾಕಿ ಕಾಮಗಾರಿಗಳು ಸೃಷ್ಟಿಯಾಗಿವೆ. ಜತೆಗೆ 3,026 ಕೋಟಿ ರು. ಬಿಲ್ ಬಾಕಿ ಉಳಿದಿದೆ. ಹೀಗಾಗಿ ಇನ್ನೂ ಆರಂಭವಾಗದ 11,400 ಕೋಟಿ ರು. ಮೊತ್ತದ ಯೋಜನೆಗಳನ್ನು ತಾತ್ಕಾಲಿಕವಾಗಿ ಕೈಬಿಟ್ಟು ಪುನರ್ ಪರಿಶೀಲನೆಗೆ ಒಳಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.