Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಾಳೆಯಿಂದಲೇ ದಸರಾ ರಜೆ ಘೋಷಣೆ: ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ನಾಳೆಯಿಂದಲೇ ದಸರಾ ರಜೆ ಘೋಷಣೆ: ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

Sampriya

ಬೆಂಗಳೂರು , ಬುಧವಾರ, 2 ಅಕ್ಟೋಬರ್ 2024 (14:34 IST)
Photo Courtesy X
ಬೆಂಗಳೂರು: ರಾಜ್ಯದ ಎಲ್ಲಾ ಶಾಲಾಗಳಿಗೆ ನಾಳೆಯಿಂದಲೇ ದಸರಾ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಾಳೆಯಿಂದ ನವರಾತ್ರಿ ಶುರುವಾಗುತ್ತಿದೆ. ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಸದ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅ.3 ರಿಂದ 20ರ ತನಕ ದಸರಾ ರಜೆ ಘೋಷಿಸಿದ್ದು ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ.

2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭವಾಗಲಿದೆ.

ಅಕ್ಟೋಬ‌ರ್ 21ರಿಂದ 2ನೇ ಅವಧಿ ಪ್ರಾರಂಭ ಆಗಲಿದೆ. 2025ರ ಏಪ್ರಿಲ್ 10 ತನಕ ಶಾಲೆಗಳು ನಡೆಯಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತಂತೆ ಆದೇಶ ಹೊರಡಿಸಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

2024-25ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಗಿದ್ದು, ಮೊದಲ ಅವಧಿಯು ಅಕ್ಟೋಬರ್​​ 2ರ ತನಕ ಇತ್ತು. ಎರಡನೇ ಅವಧಿ ಅ.21ರಂದು ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಬ್ಬಾಬ್ಬ ಎಂಥ ಸೆಕೆ: ರಾಜ್ಯ ರಾಜಧಾನಿಯಲ್ಲೂ ಗರಿಷ್ಠ ಉಷ್ಣಾಂಶ ದಾಖಲು