Publish Date: Sun, 11 Oct 2020 (21:42 IST)
Updated Date: Sun, 11 Oct 2020 (21:44 IST)
ರಾಜ್ಯ ಸರಕಾರ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ಡೆಡ್ಲಿ ಕೊರೊನಾ ಕೆಲವೆಡೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಳ್ಳುತ್ತಿದೆ.
ಈ ನಡುವೆ ಅಕ್ಟೋಬರ್ 12 ರಿಂದ 30 ರ ತನಕ ಶಾಲೆಗಳಿಗೆ ರಾಜ್ಯ ಸರಕಾರ ಮಧ್ಯಂತರ ರಜೆ ಘೋಷಣೆ ಮಾಡಿದೆ.
ಈಗಾಗಲೇ ಚಾಲ್ತಿಯಲ್ಲಿರುವ ವಿದ್ಯಾಗಮನ ಯೋಜನೆಯನ್ನೂ ನಿಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪನವರು ತಿಳಿಸಿದ್ದಾರೆ.
ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರೂ ರಜೆ ಘೋಷಣೆ ಮಾಡುವ ಕುರಿತು ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟಿದ್ದಾರೆ.