ರಾಜ್ಯಾದ್ಯಂತ ಮಳೆ ಪ್ರಮಾಣ ಇಳಿಕೆ

Webdunia
ಮಂಗಳವಾರ, 15 ನವೆಂಬರ್ 2022 (16:08 IST)
ಹವಾಮಾನ ವೈಪರೀತ್ಯದಿಂದಾಗಿ ಸುರಿಯುತ್ತಿದ್ದ ಮಳೆ ಇಳಿಕೆಯಾಗಲಿದ್ದು, ರಾಜ್ಯಾದ್ಯಂತ ಚಳಿಯ ವಾತಾವರಣ ಕಂಡು ಬರಲಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವೆಡೆ ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗಲಿದೆ. ಹೌದು ಕಳೆದ ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿತ್ತು. ಹವಾಮಾನ ವೈಪರೀತ್ಯ ಇದಕ್ಕೆ ಕಾರಣವಾಗಿತ್ತು. ಆದರೆ ಇಂದಿನಿಂದ ಮಳೆ ಪ್ರಮಾಣ ಕಡಿಮೆಯಾಗಲಿದ್ದು, ಚಳಿ ವಾತಾವರಣ ಏರಿಕೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಇನ್ನು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಅಲ್ಲದೇ ಕೆಲ ಭಾಗಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ನಗರಗಳಲ್ಲಿ ಬಿಸಿಲಿನ ವಾತಾವರಣ ಹೆಚ್ಚಲಿದೆ. ಮುಂಜಾನೆ ಹಾಗೂ ರಾತ್ರಿ ಹೊತ್ತು ಚಳಿ ಏರಿಕೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, ತನ್ನ ಸುರಕ್ಷತೆಯನ್ನು ಲೆಕ್ಕಿಸದೆ ವಯಸ್ಸಾದ ಮಹಿಳೆಗೆ ಒಂದು ಹನಿ ನೀರು ಸೋಕದ ಹಾಗೇ ಕಾಪಾಡಿದ ಇಂಡಿಗೋ ವಿಮಾನ ಸಿಬ್ಬಂದಿ

ಅಡ್ಡ ಮತದಾನ ಮಾಡಿದವರಿಗೆ ಧರ್ಮಸ್ಥಳ ಪರೀಕ್ಷೆ

ಆಧುನಿಕ ದಿನದಲ್ಲಿ ಒತ್ತಡಕ್ಕೆ ಯೋಗವೇ ಮದ್ದು: ಬಿವೈ ವಿಜಯೇಂದ್ರ

ತೋಟಕ್ಕೆ ಕೆಲಸಕ್ಕೆ ಹೋದ ಪೋಷಕರು, ಕೊಳದಲ್ಲಿ ಬಿದ್ದು ಐದು ವರ್ಷದ ಅವಳಿ ಸಹೋದರರು ಸಾವು

KarnatakaWeather: ಇಂದು ಹೇಗಿರಲಿದೆ ಗೊತ್ತಾ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಾಮಾನ

ಮುಂದಿನ ಸುದ್ದಿ
Show comments