Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಮನಗರದಲ್ಲಿ ಜಿಂಕೆಯ ಕೊಂಬುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ..ಮರಳವಾಡಿ ಹೋಬಳಿ ಯಲಚವಾಡಿ ಗ್ರಾಮದ ದಿನೇಶ್ & ಗಣೇಶ್ ಕನಕಪುರ ತಾಲೂಕಿನ ಹಾರೋಹಳ್ಳಿ ಬಳಿ ಸಿಕ್ಕಿಬಿದ್ದಿದ್ದಾರೆ..ಬ್ಯಾಗಿನಲ್ಲಿ ಜಿಂಕೆಯ ಕೊಂಬುಗಳನ್ನು ಇಟ್ಟುಕೊಂಡು ಬಸ್‌ನಲ್ಲಿ ಮರೆತು ಬಿಟ್ಟು ಹೋಗಿದ್ರು..ಬಳಿಕ ಡಿಪೋ ಮ್ಯಾನೇಜರ್ ಬ್ಯಾಗ್ ಹಿಂದಿರುಗಿಸುವಾಗ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ..ಈ ಕುರಿತು ಹಾರೋಹಳ್ಳಿ ಉಪ ವಲಯ ಅರಣ್ಯಾಧಿಕಾರಿ ರಮೇಶ್ಗೆ ಡಿಪೋ ಮ್ಯಾನೇಜರ್ ಮಾಹಿತಿ ನೀಡಿದ್ದಾರೆ..ತಕ್ಷಣವೇ ಇಬ್ಬರು ಹುಡುಗರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸೋದಾಗಿ ವಲಯ ಅರಣ್ಯಾಧಿಕಾರಿ ದಾಳೇಶ್.ಎ.ಎಸ್. ತಿಳಿಸಿದ್ದಾರೆ.