Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮಾನನಷ್ಟ ಪ್ರಕರಣ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ಗೆ 6 ತಿಂಗಳ ಸೆರೆವಾಸ

ಮಾನನಷ್ಟ ಪ್ರಕರಣ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ಗೆ 6 ತಿಂಗಳ ಸೆರೆವಾಸ
ಹುಬ್ಬಳ್ಳಿ , ಸೋಮವಾರ, 28 ನವೆಂಬರ್ 2016 (15:13 IST)
ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧಿಸಿದಂತೆ ಹುಬ್ಬಳ್ಳಿಯ 2 ನೇಯ ಜೆಎಂಎಫ್‌ಸಿ ನ್ಯಾಯಾಲಯ ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ 6 ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 9 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಹಿರಿಯ ಪತ್ರಕರ್ತ ಗೌರಿ ಲಂಕೇಶ್ ಅವರಿಗೆ  6 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿ ಹುಬ್ಬಳ್ಳಿಯ 2 ನೇಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಅಮರ್. ವಿ.ಎಲ್. ಅವರು ಆದೇಶ ನೀಡಿದ್ದಾರೆ.
 
2008 ರಲ್ಲಿ ಗೌರಿ ಲಂಕೇಶ್ ಅವರು ತಮ್ಮ ಪತ್ರಿಕೆಯಲ್ಲಿ ಸಂಸದ ಪ್ರಹ್ಲಾದ್ ಜೋಶಿ ಹಾಗೂ ಇನ್ನೊಬ್ಬ ಬಿಜೆಪಿ ಕಾರ್ಯಕರ್ತನ ವಿರುದ್ಧ ಅವಹೇಳನಕಾರಿ ಲೇಖನ ಪ್ರಕಟಿಸಿದ್ದರು. 
 
 ಇದನ್ನು ಪ್ರಶ್ನಿಸಿ ಸಂಸದ ಪ್ರಹ್ಲಾದ್ ಜೋಶಿ ಹಾಗೂ ಉಮೇಶ್ ಎಂಬುವವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಸುದೀರ್ಘ 8 ವರ್ಷಗಳ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿಯನ್ನು ರಾಜಕೀಯದಿಂದಲೇ ಹೊರಹಾಕುತ್ತೇನೆ: ಅಬ್ಬರಿಸಿದ ಮಮತಾ ಬ್ಯಾನರ್ಜಿ