ನವದೆಹಲಿ: ಪ್ರಧಾನಿ ಮೋದಿಯವರನ್ನು ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ಉದ್ಯಮಿ ನೀರವ್ ಮೋದಿಗೆ ಹೋಲಿಸಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗಿದೆ.
ಇತ್ತೀಚೆಗೆ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ರಾಹುಲ್ ಗಾಂದಿ ಮೋದಿಯನ್ನು ನೀರವ್ ಮೋದಿ ವಿಚಾರದಲ್ಲಿ ಆಕ್ಷೇಪಾರ್ಹವಾಗಿ ಮಾತನಾಡಿ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಶಲಬ್ ಮಣಿ ತ್ರಿಪಾಟಿ ಎಂಬವರು ಉತ್ತರಪ್ರದೇಶದ ಗೋರಖ್ ಪುರದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಇದೀಗ ಏಪ್ರಿಲ್ 5 ರಂದು ಪ್ರಕರಣದ ವಿಚಾರಣೆ ನಡೆಯಲಿದೆ. ದಿಯೋರಾದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ರಾಹುಲ್ ಗಾಂಧಿ ಹೇಳಿಕೆಯಿಂದ ಪಕ್ಷದ ಕಾರ್ಯಕರ್ತರಿಗೆ ಮತ್ತು ದೇಶದ ಜನತೆಗೆ ನೋವಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ