Webdunia - Bharat's app for daily news and videos

Install App

ನನ್ನ ವಿರುದ್ಧ ಪಿತೂರಿ ಮಾಡುವ ಬಿಜೆಪಿಯನ್ನು ಸೋಲಿಸಿ ಬುದ್ಧಿ ಕಲಿಸಿ: ಸಿದ್ದರಾಮಯ್ಯ

Sampriya
ಸೋಮವಾರ, 14 ಅಕ್ಟೋಬರ್ 2024 (17:16 IST)
Photo Courtesy X
ಸಂಡೂರು: ಈ.ತುಕಾರಾಮ್ ಅವರು ಈ ಬಾರಿ ಶಾಸಕರಾದ ಬಳಿಕ 1200 ಕೋಟಿ ಅನುದಾನವನ್ನು ಸಂಡೂರು ಜನತೆಗಾಗೆ ತಂದಿದ್ದಾರೆ. ಅಭಿವೃದ್ಧಿ ಎಂದರೆ ತುಕಾರಾಮ್, ತುಕಾರಾಮ್  ಎಂದರೆ ಅಭಿವೃದ್ಧಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಡೂರು ತಾಲ್ಲೂಕಿನ ಸಾಧನಾ  ಸಮಾವೇಶವನ್ನು ಉದ್ಘಾಟಿಸಿ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯನ್ನು  ನೆರವೇರಿಸುವುದರ ಜೊತೆಗೆ ಪೂರ್ಣಗೊಂಡಿರುವ ಸುಮಾರು 400 ಕೋಟಿಗೂ ಅಧಿಕ ಮೊತ್ತದ ಯೋಜನೆಗಳನ್ನು ಸಂಡೂರು ಜನತೆಗೆ ಅರ್ಪಿಸಿ ಮಾತನಾಡಿದರು.

ಸಂಡೂರಿನಲ್ಲಿ 12 ಸಾವಿರ ಮನೆಗಳನ್ನು ಕಟ್ಟಿ ಕ್ಷೇತ್ರದ ಜನರಿಗೆ ಹಂಚಿಕೆ ಮಾಡಿರುವುದರ ಶ್ರೇಯಸ್ಸು ಸಂತೋಷ್ ಲಾಡ್- ಈ.ತುಕಾರಾಮ್ ಜೋಡಿಗೆ ಸಲ್ಲಬೇಕು.
ನನ್ನ ವಿರುದ್ಧ ಷಡ್ಯಂತ್ರ, ಪಿತೂರಿ ನಡೆಸುತ್ತಿರುವ ಬಿಜೆಪಿಯನ್ನು ಉಪ ಚುನಾವಣೆಯಲ್ಲಿ ಸೋಲಿಸಿ ಪಾಠ ಕಲಿಸಿ ಎಂದು ಸಿಎಂ ಕರೆ ನೀಡಿದರು.

ಈ.ತುಕಾರಾಮ್ ಅವರು ನನ್ನ ಬಲವಂತಕ್ಕೆ, ಪಕ್ಷದ ಮಾತಿಗೆ ಬೆಲೆ ಕೊಟ್ಟು ಲೋಕಸಭೆಗೆ ಸ್ಪರ್ಧಿಸಿದರು. ಈ.ತುಕರಾಮ್ ಅವರು ಸಂಡೂರು ಜನತೆಯ ಮೇಲೆ ಬಹಳ ಪ್ರೀತಿ, ವಿಶ್ವಾಸ ಇಟ್ಟುಕೊಂಡಿದ್ದಾರೆ. ಈ.ತುಕಾರಾಮ್ ಅವರಂತಹ ಕಾಯಕ ನಾಯಕ ನಿಮಗೆ ಬೇರೆಲ್ಲೂ ಸಿಗುವುದಿಲ್ಲ. ಹೀಗಾಗಿ ಸಂಡೂರು ಉಪಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ನಿಮ್ಮ ಆಶೀರ್ವಾದ ಹೀಗೇ ಮುಂದುವರೆಯಲಿ ಎಂದು ಸಿಎಂ ವಿನಂತಿಸಿದರು.

ಸಂಡೂರಿನ ಜನತೆಯೂ ಸೇರಿ ರಾಜ್ಯದ ಜನತೆಗೆ ಐದೈದು ಗ್ಯಾರಂಟಿಗಳನ್ನು 56000 ಕೋಟಿ ವೆಚ್ಚದಲ್ಲಿ ಯಶಸ್ವಿಯಾಗಿ ಜಾರಿ  ಮಾಡಿದ್ದೇವೆ. ಬಿಜೆಪಿ ಯವರು ಸುಳ್ಳುಗಳನ್ನು ಎರಚುತ್ತಾ ಕುಳಿತಿದೆ ಎಂದರು.

ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿಯ ಪೆದ್ದ ಶಿಖಾಮಣಿಗಳು ಸುಳ್ಳುಗಳನ್ನು ಎರಚುತ್ತಾ ಕುಳಿತಿದ್ದಾರೆ. ಹಾಗಿದ್ರೆ ಬರೀ ಸಂಡೂರಿನ ಅಭಿವೃದ್ಧಿಗೆ ಕಳೆದ ಒಂದು ವರ್ಷದಲ್ಲಿ ಈ.ತುಕಾರಾಮ್ ಅವರು 1200 ಕೋಟಿ ರೂಪಾಯಿ ಅನುದಾನ ತರಲು ಸಾಧ್ಯವಾಗುತ್ತಿತ್ತೇ ಎಂದು ಪ್ರಶ್ನಿಸಿದರು.

ಸಂಡೂರಿನ ಜನರ ತೆರಿಗೆ ಹಣಕ್ಕೆ, ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರ ಸರ್ಕಾರ ನಿರಂರವಾಗಿ ವಂಚಿಸುತ್ತಿದೆ. ನಿಮಗೆ, ನಮಗೆ ಕೇಂದ್ರದಿಂದ ಬರಬೇಕಾದ ಹಣವನ್ನು ಕೊಡಿ ಎಂದು ಮೋದಿಗೆ ಕೇಳುವ ಧೈರ್ಯ ಬಿಜೆಪಿಗೆ ಇಲ್ಲ. ವಿಜಯೇಂದ್ರಗೆ ಇಲ್ಲ. ಇದು ಸಂಡೂರಿನ ಜನತೆಗೆ, ರಾಜ್ಯದ ಜನತೆಗೆ ಬಗೆದ ದ್ರೋಹ ಅಲ್ಲವೇ ಎಂದು ಸಿಎಂ ಪ್ರಶ್ನಿಸಿದರು.

ತೆರಿಗೆ ಕಟ್ಟುವುದರಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಆದರೆ ನಮ್ಮ ಪಾಲು ವಾಪಾಸ್ ಕೊಡುವುದರಲ್ಲಿ ಕೇಂದ್ರ ಸರ್ಕಾರ ಕೊನೆ ಸ್ಥಾನದಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್ ಖಾನ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ,  ಮಾಜಿ ಸಚಿವರೂ-ಸಂಸದರೂ ಆದ ಈ.ತುಕಾರಾಂ, ಶಾಸಕರುಗಳಾದ ಲತಾ ಮಲ್ಲಿಕಾರ್ಜುನ್, ಕಂಪ್ಲಿ ಗಣೇಶ್, ಶ್ರೀನಿವಾಸ್, ನಾಗರಾಜ್, ನಾರಾ ಭರತ್ ರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಧ್ಯಕ್ಷರಾದ ಮೆಹರೂಜ್ ಖಾನ್,  ಕೆಎಂಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಹಿರಿಯ ನಾಯಕರಾದ ಅಲ್ಲಂ ವೀರಭದ್ರಪ್ಪ, ಲಿಡ್ಕರ್ ಅಧ್ಯಕ್ಷರಾದ  ನಾಗರಾಜ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

ಮುಂದಿನ ಸುದ್ದಿ
Show comments