ಬೆಂಗಳೂರು : ವಿಧಾನಸಭೆಯಲ್ಲಿ ಇಂದು ಹಾಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸವಾಲು ಹಾಕಿದ ಘಟನೆ ನಡೆಯಿತು.
ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಧರಣಿಗೆ ಸ್ಪೀಕರ್ ಕೂಡ ಗರಂ ಆಗಿದ್ದರು.
ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಇವತ್ತು ಕೂಡ ಧರಣಿ ಮುಂದುವರಿಸಿ ಕಲಾಪಕ್ಕೆ ಅಡ್ಡಿ ಪಡಿಸಿತು. ಆ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ಚರ್ಚೆಯಲ್ಲಿ ಭಾಗವಹಿಸಿ, ಧರಣಿ ಕೈಬಿಡಿ.
ಕಲಾಪಕ್ಕೆ ಅಡ್ಡಿ ಮಾಡುವುದು ಸರಿಯಾದ ಕ್ರಮ ಅಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಶೋಭೆ ಅಲ್ಲ. ಕಾಂಗ್ರೆಸ್ ಪಕ್ಷಕ್ಕೂ ಇದು ಶೋಭೆ ಅಲ್ಲ. ಹೊರಗಡೆ ಏನಾದರೂ ಮಾಡಿ, ಕಲಾಪ ನಡೆಸಲು ಅವಕಾಶ ಕೊಡಿ ಅಂತಾ ಹೇಳಿದರು.