Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ: ಅವ್ಯವಹಾರ ತನಿಖೆಗೆ ಆಗ್ರಹ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ: ಅವ್ಯವಹಾರ ತನಿಖೆಗೆ ಆಗ್ರಹ
ಬೆಂಗಳೂರು , ಬುಧವಾರ, 5 ಸೆಪ್ಟಂಬರ್ 2018 (19:38 IST)
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಅವ್ಯವಹಾರ ಆಗಿದೆಯಾ? ಇಂಥದ್ದೊಂದು ಚರ್ಚೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಗ್ರಾಸವೊದಗಿಸಿದ್ದು, ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಅವ್ಯವಹಾರ ಭಾರಿ ಪ್ರಮಾಣದಲ್ಲಿ ಆಗಿದೆ. ಹೀಗಾಗಿ ಈ ಕುರಿತು ಸಿಬಿಐ ತನಿಖೆ ಆಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.

ರೈತರಿಗಿಂತಲೂ ಈ ಯೋಜನೆ ಖಾಸಗಿ ವಿಮಾ ಕಂಪನಿಗಳಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಈ ಮೂಲಕ ರೈತರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದೆ. ಈ ಸಂಬಂಧ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಪೆಟ್ರೋಲ್, ಡೀಸೆಲ್ ದುಬಾರಿ: ಗಗನಕ್ಕೇರುತ್ತಿರುವ ಅಗತ್ಯ ವಸ್ತುಗಳ ಬೆಲೆ