ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದ್ದ ಬಿಟ್ ಕಾಯಿನ್ ಹಗರಣವನ್ನು ಮರು ತನಿಖೆ ಮಾಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ಬೆಂಗಳೂರಿನ ಸದಾಶಿವ ನಗರದಲ್ಲಕ ಮಾತನಾಡಿರುವ ಡಿಸಿಎಂ ಜಿ.ಪರಮೇಶ್ವರ್ ಬಿಟ್ ಕಾಯಿನ್ ಪ್ರಕರಣವನ್ನೂ ಮರು ತನಿಖೆ ಮಾಡುತ್ತೇವೆ. ಬಿಜೆಪಿಯವರು ಈಗಾಗಲೇ ಈ ವಿಚಾರವಾಗಿ ಕುಣಿದಾಡುತ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನ ಆಗಿದೆ ಅಷ್ಟೇ. ಅವರು ಸ್ವಲ್ಪ ಸಮಾಧಾನದಿಂದ ಇರುವುದು ಒಳ್ಳೆಯದು. ಈ ಪ್ರಕರಣದ ಮರು ಪರಿಶೀಲನೆ ಮಾಡ್ತೇವೆ ಎಂದ್ರು. ಬಿಟ್ ಕಾಯಿನ್ ತನಿಖೆ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಹೊಸ ಬಾಂಬ್ ಸಿಡಿಸಿದ್ರು.ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿಬಂದಿದ್ದ ಬಿಟ್ ಕಾಯಿನ್ ಹಗರಣದ ವಿಷಯವನ್ನು ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಬಳಸಿಕೊಂಡರು. ಆದರೆ ಇವತ್ತು ಯಾಕೆ ಆ ಪ್ರಕರಣದ ಬಗ್ಗೆ ತನಿಖೆ ಆಗುತ್ತಿಲ್ಲ ಎಂದು ಪ್ರಶ್ನೆಮಾಡಿದ್ರು...ಈಗ ಈ ಪ್ರಕರಣವನ್ನು ಮರು ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ರಡಿಯಾಗ್ತಿದೆ.