Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂಧಪಟ್ಟಂತೆ ಮುರುಘಾ ಶ್ರೀಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಶ್ರೀಗಳ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಟೌನ್ಹಾಲ್ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗ ಆಗಮಿಸಿದ ಪ್ರತಿಭಟನಾಕಾರರು, ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಶ್ರೀಗಳಿಗೆ ಸರ್ಕಾರ ರಕ್ಷಣೆ ನೀಡ್ತಿದೆ ಅಂತಾ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು. ಸಾಮಾನ್ಯರಿಗೊಂದು ನ್ಯಾಯ, ಸ್ವಾಮೀಜಿಗಳಿಗೊಂದು ನ್ಯಾಯನಾ.. ಕೂಡಲೇ ಶ್ರೀಗಳನ್ನ ಬಂಧಿಸುವಂತೆ ಆಗ್ರಹಿಸಿದರು. ಈ ಮಧ್ಯೆ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಳೆಗೆ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆಯಾಗಿದೆ.
ನಾಳೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಚಿತ್ರದುರ್ಗ ಸೆಷನ್ಸ್ ಕೋರ್ಟ್ ಸೂಚನೆ ನೀಡಿದೆ.