ಬೆಳಗಾವಿ -ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ 4 ಮನೆಗಳ ದ್ವಂಸ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ನಾಲ್ವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 1ರಂದು ಅಪ್ರಾಪ್ತರ ತ್ರಿಕೋನ ಪ್ರೇಮ ಪ್ರಕರಣದಲ್ಲಿ ಗಲಾಟೆಯಾಗಿ ಮನೆಗಳ ಧ್ವಂಸ ಮತ್ತು ದಾಂಧಲೆ ಮಾಡಲಾಗಿತ್ತು.
ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂದ ಕಾಕತಿ ಗ್ರಾಮದ ನ್ವಾರು ಅರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.. ಇದೀಗ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಬೆಳಗಾವಿ ಗ್ರಾಮೀಣ ಠಾಣೆ ಪಿಐ ಮಂಜುನಾಥ ಹಿರೇಮಠ ನೇತೃತ್ವದ ತಂಡದಿಂದ ಇನ್ನುಳಿದ ಆರೋಪಿಗಳ ಬಂಧನಕ್ಕೆ ಶೊಧಕಾರ್ಯ ಮುಂದುವರೆದಿದೆ.