ದೇಶದ್ಯಾಂತ ಕೊರೊನಾ ವೈರಸ್ ವಿರುದ್ಧದ ಹೋರಾಟದ ಅಂಗವಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಆದರೆ ಲಾಕ್ ಡೌನ್ ವಿರುದ್ಧವಾಗಿ ರಸ್ತೆಯಲ್ಲಿ ಆಟವಾಡಿದ ಯುವಕರನ್ನು ಬಂಧನ ಮಾಡಲಾಗಿದೆ.
ಲಾಕ್ ಡೌನ್ ಉಲ್ಲಂಘನೆ ಮಾಡಿ ನಡು ರಸ್ತೆಯಲ್ಲೇ ಆಟವಾಡಿದ ಐವರನ್ನು ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪರಾರಿಯಾಗಿರುವ 12 ಯುವಕರ ಬಂಧನಕ್ಕೆ ಬಲೆ ಬೀಸಿದ್ದಾರೆ. ಒಟ್ಟು 17 ಜನರ ಮೇಲೆ ಕೇಸ್ ದಾಖಲಾಗಿದೆ.