ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಉರುಳಿಸಲು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಒಳಸಂಚು ರೂಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಆರೋಪಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲೇಬೇಕು ಎಂದು ಪಣ ತೊಟ್ಟಿರುವ ದೇವೇಗೌಡರು, ಕಾಂಗ್ರೆಸ್ ಪಕ್ಷದ ರೆಬಲ್ ಶಾಸಕರನ್ನು ಸೆಳೆಯುವ ಯತ್ನ ನಡೆಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಉರುಳಿಸಲು ಒಳ ಸಂಚು ರೂಪಿಸುತ್ತಿದ್ದಾರೆ ಎಂದರು.
ಸಿಎಂ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಸಿಎಂ ಇಬ್ರಾಹಿಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ, ಈ ಕೂಡಲೇ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ಕಿತೊಗೆಯಬೇಕು ಎಂದು ಆಗ್ರಹಿಸಿದರು.
ದಶಕಗಳಿಂದ ಚಡ್ಡಿದೋಸ್ತ್ರು ಆಗಿರುವ ಸಿಎಂ ಇಬ್ರಾಹಿಂ ಹಾಗೂ ಸಿಎಂ ಸಿದ್ದರಾಮಯ್ಯನವರ ನಡುವೆ ಮುಸುಕಿನ ಗುದ್ದಾಟ ಪ್ರಾರಂಭವಾಗಿದ್ದು, ಇವರಿಬ್ಬರ ನಡುವಿನ ಸಂಬಂಧ ಹಳಸಿ ಹೋಗಿದೆಯಾ ಎನ್ನುವ ಅನುಮಾನ ಎಲ್ಲರಲ್ಲೂ ಕಾಡುತ್ತಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ