ಬೆಂಗಳೂರು : ಜೆಡಿಎಸ್ ನಾಯಕರು ಹಾಗೂ ಅವರ ಸಂಬಂಧಿಕರ ಮೇಲೆ ನಡೆದ ಐಟಿ ದಾಳಿಯ ಹಿಂದಿನ ಅಸಲಿ ಕಾರಣ ಏನೆಂಬುದನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ್ರು ಬಹಿರಂಗಪಡಿಸಿದ್ದಾರೆ.
ಲೋಕಸಭಾ ಚುನಾವಣಾ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಆದಾಯ ತೆರಿಗೆ ಇಲಾಖಾ ಅಧಿಕಾರಿಗಳು ಸಚಿವ ಎಸ್.ಪುಟ್ಟರಾಜು ಸೇರಿ ರಾಜ್ಯದ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು.
ಈ ನಡುವೆ ದಾಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳ ಜೊತೆ ಮಾತನಾಡಿದ ದೇವೇಗೌಡ್ರು ಐಟಿ ದಾಳಿಗೆ ಅಸಲಿ ಕಾರಣವೆನೆಂಬುದನ್ನು ತಿಳಿಸಿದ್ದಾರೆ. ಸರಕಾರ ರಚನೆ ಮಾಡುವುದಕ್ಕೆ ಅಂದು ಅಮಿತ್ ಶಾ ಕೊಟ್ಟ ಆಫರ್ ಅನ್ನು ನಾವು ನಿರಾಕರಿಸಿದ್ದೇವು. ಅಷ್ಟೇ ಅಲ್ಲದೇ ಈ ಹಿಂದೆ ಜೆಡಿಎಸ್ ಜೊತೆಗೆ ಸರಕಾರ ವನ್ನು ರಚಿಸುವುದಕ್ಕೆ ಬಿಜೆಪಿ ಮುಂದಾಗಿತ್ತು, ಅದು ಸಾಧ್ಯವಾಗದ ಕಾರಣ ಬಿಜೆಪಿಯವರು ದಾಳಿ ನಡೆಸಿದ್ದಾರೆ ಅಂತ ಗಂಭೀರ ಆರೋಪ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.