Publish Date: Tue, 01 May 2018 (07:45 IST)
Updated Date: Tue, 01 May 2018 (07:46 IST)
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜತೆಗೆ ಕುಮಾರಸ್ವಾಮಿ ಗುಪ್ತ ಮಾತುಕತೆ ನಡೆಸಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪದ ಬೆನ್ನಲ್ಲೇ ಜೆಡಿಎಸ್ ವರಿಷ್ಠ ದೇವೇಗೌಡರು ಭೀಷ್ಮ ಪ್ರತಿಜ್ಞೆ ಮಾಡಿದ್ದಾರೆ.
‘ಒಂದು ವೇಳೆ ಕುಮಾರಸ್ವಾಮಿ ನನ್ನ ಅನುಮತಿ ಇಲ್ಲದೇ ಬಿಜೆಪಿ ಜತೆಗೆ ಮೈತ್ರಿಗೆ ಮುಂದಾದರೆ ಅಪ್ಪ-ಮಗನ ಸಂಬಂಧ ಕಟ್ ಆಗುತ್ತದೆ. ಅಷ್ಟೇ ಅಲ್ಲ, ನಮ್ಮ ಕುಟುಂಬದಿಂದಲೇ ಬಹಿಷ್ಕಾರ ಹಾಕಬೇಕಾಗುತ್ತದೆ’ ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ದೇವೇಗೌಡರು ಎಚ್ಚರಿಕೆ ನೀಡಿದ್ದಾರೆ.
ಅತಂತ್ರ ಸ್ಥಿತಿ ನಿರ್ಮಾಣವಾದರೆ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಬೇಕಾದರೂ ಕುಮಾರಸ್ವಾಮಿ ನನ್ನ ಅನುಮತಿ ಪಡೆಯಬೇಕು ಎಂದು ದೇವೇಗೌಡರು ಖಡಕ್ ಆಗಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.
Krishnaveni K
Publish Date: Tue, 01 May 2018 (07:45 IST)
Updated Date: Tue, 01 May 2018 (07:46 IST)