Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮೇಲೆ ವಾಕ್ಪ್ರಹಾರ ಮುಂದುವರಿಸಿರುವ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಅವರ ರಾಜಕೀಯ ಜೀವನ ಅಂತ್ಯವಾಗುತ್ತದೆ ನೋಡ್ತಿರಿ ಎಂದಿದ್ದಾರೆ.
ಸಿದ್ದರಾಮಯ್ಯ ರಾಜಕೀಯ ಜೀವನ ಆರಂಭವಾಗಿದ್ದು, ಚಾಮುಂಡೇಶ್ವರಿಯಲ್ಲಿ. ಅಲ್ಲಿಯೇ ಅವರ ರಾಜಕೀಯ ಜೀವನ ಅಂತ್ಯವಾಗಲಿದೆ ಎಂದು ಅವರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಭಿಪ್ರಾಯಪಟ್ಟಿದ್ದಾರೆ.
ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಬೆಳೆದು ಅಧಿಕಾರ ಅನುಭವಿಸಿ ಬೇರೆ ಪಕ್ಷಕ್ಕೆ ಹೋಗಿ ಇದೀಗ ಮಾತೃಪಕ್ಷವನ್ನೇ ಮುಗಿಸಲು ಯತ್ನಿಸುತ್ತಿದ್ದಾರೆ. ಉಪ ಮುಖ್ಯಮಂತ್ರಿ ಮಾಡಿದರೂ ಸಾಕಾಗದೇ ಬೇರೆ ಪಕ್ಷಕ್ಕೆ ಹೋಗಿ ಮುಖ್ಯಮಂತ್ರಿಯಾದರು. ಆದರೂ ಸಾಲದೆಂಬಂತೆ ಇದೀಗ ಮಾತೃಪಕ್ಷಕ್ಕೇ ದ್ರೋಹ ಬಗೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ