ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಶಾಸಕರಾದ ಎಲ್.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ಇಬ್ಬರು ಒಂದೇ ತಾಯಿಯ ಮಕ್ಕಳಂತೆ ನಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
ಇಬ್ಬರಲ್ಲೂ ಕೆಲವು ಸಣ್ಣ ವ್ಯತ್ಯಾಸಗಳಿವೆ. ಇಬ್ಬರು ನಾಯಕರು ಒಟ್ಟಿಗೆ ಸೇರಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು. ಹಿಂದೆ ನಿಮ್ಮ ಕಾಲದಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ತುಂಬಾ ತೊಂದರೆಯಾಗಿದೆ. ಹಿಂದಿನದೆಲ್ಲವನ್ನು ಮರೆತು ಪಕ್ಷದ ಹಿತಕ್ಕಾಗಿ ದುಡಿಯಿರಿ ಎಂದು ಕಿವಿಮಾತು ಹೇಳಿದ್ದಾರೆ
ಚೆಲುವರಾಯಸ್ವಾಮಿ ಜೊತೆ ಸಿಎಂ ಸಿದ್ದರಾಮಯ್ಯ ಇದ್ದಾರೆ. ಮುಂದಿನ 9 ತಿಂಗಳುಗಳವರೆಗೆ ಅವರ ಜೊತೆಯಲ್ಲಿಯೇ ಇರುತ್ತಾರೆ. ಅವರು ನಿಮ್ಮ ಮೇಲೆ ಪ್ರಕರಣಗಳನ್ನು ದಾಖಲಿಸಬಹುದು. ಆದರೆ, ಹೆದರುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮೆಲ್ಲರ ಹೊಣೆಯಾಗಿದೆ. ಕುಮಾರಸ್ವಾಮಿ ಮತ್ತು ನಾನು ಶೀಘ್ರದಲ್ಲಿಯೇ ರಾಜ್ಯಾದ್ಯಂತ ಪ್ರಚಾರ ಮಾಡಿ ಪಕ್ಷವನ್ನು ಸಂಘಟಿಸುತ್ತೇವೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.