Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವೆಂಬರ್ 6: 'ನೀವು (ಪ್ರಧಾನಮಂತ್ರಿ ನರೇಂದ್ರ ಮೋದಿ) ಕೇದಾರನಾಥದಲ್ಲಿ ಉದ್ಘಾಟಿಸಿದ ಆದಿ ಗುರು ಶ್ರೀ ಶಂಕರಾಚಾರ್ಯರ ಕಪ್ಪು ಕಲ್ಲಿನ ಸುಂದರ ಮೂರ್ತಿಯನ್ನು ನನಗೆ ನೋಡಬೇಕು ಅನಿಸಿದೆ' ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪತ್ರದ ಮೂಲಕ ತಮ್ಮ ಆಸೆ ತಿಳಿಸಿದ್ದಾರೆ.ಶಂಕರಾಚಾರ್ಯರ ಪವಿತ್ರ ಕ್ಷೇತ್ರವನ್ನು ಪುನರ್ನಿರ್ಮಾಣ ಮಾಡುವಲ್ಲಿ ನೀವು ಕೈಗೊಂಡ ಕಾರ್ಯಗಳಿಗಾಗಿ ನಾನು ನಿಮಗೆ ಶುಭಾಶಯ ಕೋರುತ್ತೇನೆ ಎಂದು ಜೆಡಿಎಸ್ ವರಿಷ್ಠರೂ ಆಗಿರುವ ದೇವೇಗೌಡರು ಹೇಳಿದ್ದು, ಈ ವಿಚಾರವನ್ನು ಅವರು ಇಂದು (ನವೆಂಬರ್ 6) ಬರೆದ ಪತ್ರದಲ್ಲಿ ತಿಳಿಸಿದ್ದಾರೆ.