ಚುನಾವಣಾ ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಈಗಾಗಲೇ ಬಜೆಟ್ನಲ್ಲೂ ಕೃಷಿಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಸಿರಿಧಾನ್ಯಗಳ ಉತ್ಪಾದನೆ, ಮೀನುಗಾರಿಕೆ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ ಎಂದು ತಿಳಿಸಿದ್ರು.. ಜನರ ಹಿತದೃಷ್ಟಿಯನ್ನಿಟ್ಟುಕೊಂಡು ಪ್ರಣಾಳಿಕೆ ತಯಾರಿಸಿದ್ದೇವೆ. ಪ್ರಣಾಳಿಕೆ ರಾಜ್ಯ ಸರ್ಕಾರ ನಡೆಯುವ ದಿಕ್ಕನ್ನು ತೋರಿಸುತ್ತದೆ. ಸುಮಾರು 2 ವರ್ಷ ಕೊರೋನಾದಿಂದ ಆರ್ಥಿಕ ಕುಸಿತವಾಯಿತು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.