Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ನಾನು ನಾನ್ ವೆಜ್ ತಿಂದಿದ್ದೆ ಅನ್ನೋದನ್ನ ಮರೆತಿದ್ದೆ. ಅದು ನನ್ನ ಭೇಟಿಯ ಉದ್ದೇಶವಾಗಿರಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಿಳಿಸಿದರು.
ಸಿಟಿ ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಫೋಟೋ ವೈರಲ್ ಆದ ಬೆನ್ನಲ್ಲೇ ಪರ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ನಾನು ನಾನ್ ವೆಜ್ ತಿಂದಿದ್ದೆ ಅನ್ನೋದನ್ನ ಮರೆತಿದ್ದೆ.
ಅಲ್ಲಿನ ಸ್ಥಳೀಯರ ಅಪೇಕ್ಷೆ ಮೇರೆಗೆ ಹೋಗಿದ್ದೆ. ಹೀಗಾಗಿ ನಾನು ದೇವಸ್ಥಾನ ಪ್ಯಾಸೇಜ್ ಬಳಿ ಮಾತ್ರ ಹೋಗಿದ್ದೆ. ಎಲ್ಲವನ್ನೂ ಎದೆ ಬಗೆದು ತೋರಿಸಲು ನಾನು ಹನುಮಂತ ಅಲ್ಲ. ಕಾಂಗ್ರೆಸ್ನವರಂತೆ ನಾನು ತಿಂದು ಹೋಗಿದ್ದೆ ಏನ್ ಈಗ ಅಂತ ನಾನು ಹೇಳಲ್ಲ ಎಂದು ಸ್ಪಷ್ಟ ಪಡಿಸಿದರು.