ಬೆಂಗಳೂರು : ಮಾಜಿ ಸಚಿವ ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ಐಟಿ ದಾಳಿಯ ವೇಳೆ ಡಿಕೆಶಿ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯ ಈಗಾಗಲೆ ಡಿಕೆಶಿವಕುಮಾರ್ ಅವರನ್ನು ಬಂಧಿಸಿ ಈ ಬಗ್ಗೆ ವಿಚಾರಣೆ ನಡೆಸುತ್ತಿದೆ. ಆದರೆ ಸರಿಯಾದ ಮಾಹಿತಿ ಸಿಗದ ಹಿನ್ನಲೆಯಲ್ಲಿ ಇದೀಗ ಇದನ್ನು ಪತ್ತೆ ಹಚ್ಚಲು ಜಾರಿ ನಿರ್ದೇಶನಾಲಯ ಸಿಬಿಐ ನೆರವನ್ನು ಕೋರಿದೆ.
ಇಡಿ ಮನವಿಯನ್ನು ಪರಿಗಣಿಸಿದ ಸಿಬಿಐ, ತನಿಖೆ ನಡೆಸಲು ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಇದೀಗ ಸಿಬಿಐ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರದ ಗೃಹ ಇಲಾಖೆಯು ಡಿಕೆಶಿ ತನಿಖೆಗೆ ಅನುಮತಿ ನೀಡಿದೆ ಎನ್ನಲಾಗಿದೆ.