ಬೆಂಗಳೂರು : 373 ಲೋಕಸಭಾ ಕ್ಷೇತ್ರಗಳಲ್ಲಿ ಇವಿಎಂ ಲೆಕ್ಕ ತಪ್ಪಿದೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೊಸ ಆರೋಪ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ 1221 ಸ್ಥಾನಗಳಲ್ಲಿ 509 ರಲ್ಲಿ ಜಯಭೇರಿ ಬಾರಿಸಿದೆ. ಅಲ್ಲದೆ 42 ಪ್ರತಿಶತ ಸೀಟುಗಳನ್ನು ಗೆದ್ದಿದೆ. ಈ ಮೂಲಕ ಕರ್ನಾಟಕದ ಜನತೆ ಕಾಂಗ್ರೆಸ್ ಪರವಿರುವುದನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸಾಬೀತುಪಡಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಲೋಕಸಭೆ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ ಬಿಜೆಪಿ ಹೇಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದೆ ಬಿದ್ದಿದೆ ಎಂದು ಅನುಮಾನ ವ್ಯಕ್ತಪಡಿಸಿದ ಅವರು, ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ತನಿಖೆ ನಡೆಸುವುದು ಸೂಕ್ತ ಎಂದು ತಿಳಿಸಿದ್ದಾರೆ.