Publish Date: Wed, 13 Feb 2019 (15:18 IST)
Updated Date: Wed, 13 Feb 2019 (15:20 IST)
ಮಾಜಿ ಪ್ರಧಾನಿ ಹೆಚ್ .ಡಿ.ದೇವೇಗೌಡರ ಹಾಗೂ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕರ ಕ್ರಮ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ಶಾಸಕ ಪ್ರೀತಮ್ ಗೌಡ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕ ಪ್ರೀತಮ್ ಗೌಡ ಮನೆ ಮುಂದೆ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ. ಹಾಸನದ ವಿದ್ಯಾ ನಗರದಲ್ಲಿರುವ ಶಾಸಕ ಪ್ರೀತಮ್ ಮನೆ ಮುಂದೆ ಪ್ರತಿಭಟನೆ ನಡೆಯಿತು.
ಶಾಸಕ ಪ್ರೀತಮ್ ಗೌಡರನ್ನು ಬಂಧಿಸುವಂತೆ ಒತ್ತಾಯ ಮಾಡಿದ ಕಾರ್ಯಕರ್ತರು, ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರ ಕೂಗಿದರು.
ಪಾಪ ಪಾಂಡು ಪ್ರೀತಮ್ ಎಂದು ಪ್ರತಿಭಟನಾಕಾರರು ಗೇಲಿ ಮಾಡಿದರು. ಹಿರಿಯ ರಾಜಕಾರಣಿ ಬಗ್ಗೆ ಅವಹೇಳನಕಾರಿ ಮಾತನಾಡಿರುವುದಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯ ಮಾಡಿದರು.
ಪ್ರೀತಮ್ ಆಕಸ್ಮಿಕ ಶಾಸಕ ಎಂದು ಆಕ್ರೋಶ ವ್ಯಕ್ತಪಡಿಸಿದರು.