Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಳಗಾವಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಿ ಎಂದು ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒತ್ತಾಯ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಆಕಸ್ಮಿಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಕೋಮು ಸೌಹಾರ್ದತೆ ಕೆಡಿಸುವ ಯತ್ನ ನಡೆಸಿದ್ದಾರೆ.
ಹೀಗಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತಕ್ಷಣ ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು. ಜೊತೆಗೆ ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎನ್ನುವ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.