Webdunia - Bharat's app for daily news and videos

Install App

ಸಚಿವ ಹುದ್ದೆ ವಿಚಾರದಲ್ಲಿ ಭುಗಿಲೆದ್ದ ಭಿನ್ನಮತ

Webdunia
ಭಾನುವಾರ, 10 ಅಕ್ಟೋಬರ್ 2021 (14:29 IST)
ಬೆಂಗಳೂರು : ನಗರ ಉಸ್ತುವಾರಿ ಸಚಿವ ಸ್ಥಾನದ ವಿಷಯದಲ್ಲಿ ತಮ್ಮ ಸಂಪುಟದ ಸಹೋದ್ಯೋಗಿಗಳ ಮಧ್ಯೆ ಇರುವ ಭಿನ್ನಾಭಿಪ್ರಾಯಗಳ ಮಧ್ಯೆ ಸಮಸ್ಯೆಯನ್ನು ಪರಸ್ಪರ ಸೌಹಾರ್ದಯುತವಾಗಿ ಬಗೆಹರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಾಗ ಸಂಬಂಧಪಟ್ಟ ನಾಯಕರೊಂದಿಗೆ ಚರ್ಚೆ ನಡೆಸುತ್ತೇನೆ. ಬೆಂಗಳೂರು ನಗರ ಉಸ್ತುವಾರಿ ಸಚಿವರ ಹುದ್ದೆ ಎಷ್ಟು ಪ್ರಾಮುಖ್ಯ ಎಂದು ನನಗೆ ಗೊತ್ತಿದೆ, ಪರಸ್ಪರ ಸೌಹಾರ್ದಯುತವಾಗಿ ಬಗೆಹರಿಸುವುದಾಗಿ ಹೇಳಿದ್ದಾರೆ, ಸದ್ಯ ಬೆಂಗಳೂರು ನಗರ ಉಸ್ತುವಾರಿ ಸಚಿವ ಹುದ್ದೆ ಮುಖ್ಯಮಂತ್ರಿಗಳ ಬಳಿಯಿದೆ.
ಬೆಂಗಳೂರು ನಗರ ಉಸ್ತುವಾರಿ ಸಚಿವ ಹುದ್ದೆಯಲ್ಲಿ ಸಚಿವ ವಿ ಸೋಮಣ್ಣ ಮತ್ತು ಆರ್ ಅಶೋಕ್ ಅವರ ಮಧ್ಯೆ ಭಿನ್ನಾಭಿಪ್ರಾಯವಿರುವುದು ಕಳೆದ ಕೆಲ ದಿನಗಳಿಂದ ಕೇಳಿಬರುತ್ತಿದೆ. ಈ ಬಗ್ಗೆ ವಸತಿ ಸಚಿವ ವಿ ಸೋಮಣ್ಣ ಒಪ್ಪಿಕೊಂಡಿದ್ದಾರೆ. ಜೆ ಹೆಚ್ ಪಟೇಲ್ ಸರ್ಕಾರದಲ್ಲಿ ನನಗೆ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ಹುದ್ದೆ ವಹಿಸಿಕೊಂಡು ಗೊತ್ತಿದೆ. ಇಂದು ಯಾರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಬೇಕೆಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಅದು ಆಗಬಹುದು. ನಾನು ಇದರಲ್ಲಿ ಮಧ್ಯೆ ಪ್ರವೇಶಿಸದಿದ್ದರೂ ಕೂಡ ನನ್ನ ಹಿಂದಿನ ಅನುಭವಗಳನ್ನು ಆದರಿಸಿ ನನ್ನನ್ನು ಪರಿಗಣಿಸಿ ಎಂದು ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಕೇಳಿಕೊಂಡಿದ್ದು ಹೌದು. ಬೇರೆಯವರಿಗೆ ಹುದ್ದೆ ಕೊಡುವುದಾದರೆ ನನ್ನ ಅನುಭವ ಆಧಾರದ ಮೇಲೆ ಬೇರೆಯವರ ಹೆಸರು ಸೂಚಿಸುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments