ಬೆಂಗಳೂರು : ಅಪಘಾತದಲ್ಲಿ ಮೃತಪಟ್ಟ ಕೆಎಸ್ಆರ್ಟಿಸಿ ಚಾಲನಾ ಸಿಬ್ಬಂದಿಯ ಕುಟುಂಬಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ 1 ಕೋಟಿ ಅಪಘಾತ ಪರಿಹಾರದ ಚೆಕ್ ವಿತರಣೆ ಮಾಡಿದರು.
ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಚಾಲಕರಾದ ನಾಗರಾಜು, ಚಲಪತಿ ಮೃತಪಟ್ಟಿದ್ದರು. ಇಂದು ಎರಡು ಕುಟುಂಬದ ಅವಲಂಬಿತರಿಗೆ ತಲಾ 1 ಕೋಟಿ ರೂ. ಅಪಘಾತ ಪರಿಹಾರ ಚೆಕ್ ವಿತರಣೆಯನ್ನು ಕೆಎಸ್ಆರ್ಟಿಸಿ ನಿಗಮದ ಕೇಂದ್ರ ಕಚೇರಿಯಲ್ಲಿ ಮಾಡಲಾಯಿತು.
ಈ ವೇಳೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಮೃತಪಟ್ಟ ಚಾಲನಾ ಸಿಬ್ಬಂದಿಯನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಅವರ ಕುಟುಂಬಗಳ ಸುಭದ್ರತೆಗಾಗಿ ನಿಗಮವು ಜಾರಿಗೊಳಿಸಿರುವ ಈ ಅಪಘಾತ ಪರಿಹಾರ ವಿಮಾ ಯೋಜನೆಯು ಬಹಳ ಉತ್ತಮವಾಗಿದ್ದು, ಈ ಯೋಜನೆಯನ್ನು ಸದ್ಯದಲ್ಲಿಯೇ ಇತರೆ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಜಾರಿಗೊಳಿಸಲು ಕೂಡಲೇ ಕ್ರಮ ಜರುಗಿಸಲು ಸೂಚಿಸಲಾಗುವುದು ಎಂದು ತಿಳಿಸಿದರು.