ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ಶಾಲೆಗಳಲ್ಲಿ ಬಿಸಿಯೂಟದೊಂದಿಗೆ ಮೊಟ್ಟೆ ವಿತರಿಸುವ ಯೋಜನೆಯನ್ನು ರಾಜ್ಯದ ಎಲ್ಲಾ ಶಾಲೆಗಳಿಗೆ ವಿಸ್ತರಿಸುವ ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ.ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಊಟದ ಜೊತೆಗೆ ಮೊಟ್ಟೆ ನೀಡಲಿದ್ದು, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ ಕೊಡಲಾಗುತ್ತದೆ.ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಮಕ್ಕಳಿಗೆ ವರ್ಷದಲ್ಲಿ 100 ದಿನ ಬಿಸಿ ಊಟದೊಂದಿಗೆ ಬೇಯಿಸಿದ ಮೊಟ್ಟೆ ವಿತರಿಸಲು ಮತ್ತು ಮೊಟ್ಟೆ ಸೇವಿಸದ ಮಕ್ಕಳಿಗೆ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ನೀಡಲು ಶಿಕ್ಷಣ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಿದ್ದು, ಆರ್ಥಿಕ ಇಲಾಖೆ 46 ದಿನಗಳಿಗೆ ಮೊಟ್ಟೆ ವಿತರಿಸಲು ಒಪ್ಪಿಗೆ ನೀಡಿದೆ ಎಂದು ಹೇಳಲಾಗಿದೆ,