Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ-ಗ್ರಾಮಸ್ಥರಿಂದ ಸಚಿವ ಆರ್‌ಅಶೋಕಗೆ ಭವ್ಯ ಸ್ವಾಗತ

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ-ಗ್ರಾಮಸ್ಥರಿಂದ ಸಚಿವ ಆರ್‌ಅಶೋಕಗೆ ಭವ್ಯ ಸ್ವಾಗತ
bangalore , ಶನಿವಾರ, 21 ಜನವರಿ 2023 (16:04 IST)
ಹೊಸಕೋಟೆ ತಾಲೂಕು ಜಡಿಗೇನಹಳ್ಳಿ ಗ್ರಾಮದಲ್ಲಿ ಇಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವ ಆರ್.ಅಶೋಕ ಅವರು ಹಮ್ಮಿಕೊಂಡಿರುವ ಸಾರ್ವಜನಿಕ ಅಹವಾಲುಗಳ ಸ್ವೀಕಾರ ಹಾಗೂ ಗ್ರಾಮ ವಾಸ್ತವ್ಯದಲ್ಲಿ ಭಾಗವಹಿಸಲು ಆಗಮಿಸಿದ ಕಂದಾಯ ಸಚಿವ ಆರ್.ಅಶೋಕ,ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ,ಶಾಸಕ ಶರತ್ ಬಚ್ಚೇಗೌಡ,ಜಿಲ್ಲಾಧಿಕಾರಿ ಆರ್.ಲತಾ,ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣಪ್ಪ ಸೇರಿದಂತರ ಚುನಾಯಿತ ಪ್ರತಿನಿಧಿಗಳು,ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಸಂಭ್ರಮದಿಂದ ಸ್ವಾಗತಿಸಿದರು.
ಗ್ರಾಮದ ಶ್ರೀಅಭಯ ಆಂಜನೇಯಸ್ವಾಮಿ ಹಾಗೂ ಐತಿಹಾಸಿಕ ಶ್ರೀಚಂದ್ರಮೌಳೇಶ್ವರ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಸಚಿವರು ಅಲಂಕೃತ ಟ್ರಾಕ್ಟರ್ ಏರಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು.ಗ್ರಾ.ಪಂ.ಅಧ್ಯಕ್ಷೆ ಪಲ್ಲವಿ ಅರುಣಕುಮಾರ್,ಉಪಾಧ್ಯಕ್ಷ ರವಿಕುಮಾರ್ ಮತ್ತಿತರರು ಇದ್ದರು.
 
ಚಂಡೆ ಮದ್ದಳೆ,ತಮಟೆ,ಡೊಳ್ಳು,ಕೀಲುಕುದುರೆ,ಮರಗಾಲು,ಬೊಂಬೆ ಕುಣಿತ,ಮಹಿಳೆಯರ ವೀರಗಾಸೆ,ಪಟ ಕುಣಿತ,ಪೂಜಾ ಕುಣಿತ ಮೊದಲಾದ ಜನಪದ ಕಲಾತಂಡಗಳ ಮೆರವಣಿಗೆಯು ನೆರೆದ ಜಸಮೂಹದ ಚಿತ್ತಾಕರ್ಷಿಸಿತು. ಹೈನುಗಾರಿಕೆ ಉತ್ತೇಜಿಸಲು ಹಾಗೂ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಸಾಧಿಸುವ ಉದ್ದೇಶದಿಂದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಅಮೃತ ಸಿರಿ ಯೋಜನೆಯಡಿ ನೀಡಿದ ಏಳು ಮಿಶ್ರತಳಿ ಜರ್ಸಿ ಕರುಗಳನ್ನು ಸಚಿವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು.ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ಇದೇ ಸಂದರ್ಭದಲ್ಲಿ ಪಶು ಆರೋಗ್ಯ ಶಿಬಿರವನ್ನೂ ಆಯೋಜಿಸಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರೀಯ ಕಾನೂನ ಶಾಲೆಯಲ್ಲಿ ಕನ್ನಡಿಗರಿಗೆ ಪ್ರವೇಶ ಸಿಗದ ಹಿನ್ನೆಲೆ ಸಂಘಟನೆಗಳ ಆಕ್ರೋಶ