ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಮುನಿರಾಜು ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲಾ ಪಂಚಾಯತ್ ಶಾಸಕರು ಹಾಗೂ 50 ಸದಸ್ಯರು ಸಿಎಂ ಸಿದ್ದರಾಮಯ್ಯ ಅವರಲ್ಲಿ 500 ಕೋಟಿ ಅನುದಾನ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಕೋರಿ ಮನವಿ ಪತ್ರ ಸಲ್ಲಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ತ್ವರಿತವಾಗಿ 80 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಬೇಕು. ಈಗಾಗಲೇ ನಿರ್ಮಾಣಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಗುಣಮಟ್ಟ ಸರಿಯಿಲ್ಲದ ಕಾರಣ ಈ ಘಟಕವನ್ನು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಇಂಜಿನಿಯರಿಂಗ್ ವಿಭಾಗಕ್ಕೆ ನೀಡುವಂತೆ ಆಗ್ರಹಿಸಿದ್ದಾರೆ.
ಶಾಸಕರಾದ ಬೈರತಿ ಸುರೇಶ್, ಎಸ್.ಟಿ.ಸೋಮಶೇಖರ್, ಎಂ.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಪಾರ್ವತಿ ಚಂದ್ರಪ್ಪ ಸೇರಿದಂತೆ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.