ಬೆಂಗಳೂರು : ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮಾಜಿ ಕಾರ್ಪೋರೇಟರ್ ಜಾಕಿರ್ ನನ್ನು ಬಂಧಿಸಿದ್ದಾರೆ.
ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಾಕಿದ ಪ್ರಕರಣದಲ್ಲಿ ಸಂಪತ್ ರಾಜ್ ನನ್ನು ಬಂಧಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಜಾಕೀರ್ ಎಸ್ಕೇಪ್ ಹಾಕಿದ್ದ.
ಇದೀಗ ತನಿಖೆ ಮುಂದುವರಿಸಿದ ಸಿಸಿಬಿ ಪೊಲೀಸರಿಗೆ ಜಾಕೀರ್ ಕೂಡ ಶಾಸಕರ ಮನೆಗೆ ಬೆಂಕಿ ಹಾಕಲು ಕಿಡಿಗೇಡಿಗಳನ್ನು ಉತ್ತೇಜಿಸಿದ್ದಾರೆ ಎಂದು ತಿಳಿದುಬಂದಿದ್ದ ಹಿನ್ನಲೆಯಲ್ಲಿ ತಡರಾತ್ರಿ ಜಾಕೀರ್ ನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.