Select Your Language

Notifications

webdunia
webdunia
webdunia
webdunia

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

DK Shivakumar
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಂಗೀಕರಿಸಿದ್ದಾರೆ.

"ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. "ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ" ಎಂದು ಶಿವಕುಮಾರ್ ಅವರು ಹೇಳಿದ್ದಾರೆ.

ಇತ್ತೀಚೆಗೆ ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವೇಳೆ ಪಕ್ಷದ ಪರ ಪ್ರಚಾರ ಮಾಡಲು ಬಾರದೇ ಅಲ್ಪಸಂಖ್ಯಾತ ನಾಯಕರು ತಮ್ಮ ಅಸಮಧಾನ ತೋರಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕಮಾಂಡ್ ಕ್ರಮಕ್ಕೆ ಮುಂದಾಗಿದೆ. ಇದರ ಬೆನ್ನಲ್ಲೇ ಈಗ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನಿಜಕ್ಕೂ ಹೀರೋ ಈ ತಂದೆ: ಆಕ್ಸಿಡೆಂಟ್ ನಿಂದ ಮಗಳನ್ನು ಕಾಪಾಡಲು ಮಾಡಿದ್ದೇನು ನೋಡಿ video