Publish Date: Wed, 03 May 2023 (18:14 IST)
Updated Date: Wed, 03 May 2023 (19:41 IST)
ಸಭೆ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿಗೆ ಸವಾಲು ಹಾಕಿದ್ದಾರೆ.ಭಜರಂಗದಳ ನಿಷೇಧ ಘೋಷಣೆ ವಾಪಸ್ ಪಡೆಯೋದಿಲ್ಲ.ಬಿಜೆಪಿ ನವರು ಯಾವ ರೀತಿ ಬೇಕಾದ್ರೂ ನರೇಷನ್ ಮಾಡಿಕೊಳ್ಳಲ್ಲಿ,ಭಜರಂಗದಳಕ್ಕೂ ಆಂಜನೇಯನಿಗೂ ಏನು ಸಂಬಂಧ.ನಾನು ಕೂಡ ರಾಮ, ಆಂಜನೇಯ, ಶಿವನ ಭಕ್ತ.ನಾನು ಕೂಡ ದಿನ ಹನುಮಾನ್ ಚಾಲೀಸ್ ಪಠಣ ಮಾಡುತ್ತೇನೆ.ಕುಂಬಳಕಾಯಿ ಕಳ್ಳ ಅಂದ್ರೆ ಇವರ್ಯಾಕೆ ಹೆಗಲು ಮುಟ್ಟಿ ನೋಡಿಕೊಳ್ತಾ ಇದ್ದಾರೆ ಎಂದು ಬಿಜೆಪಿ ಸರ್ಕಾರಕ್ಕೆ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.