ಮೈತ್ರಿ ಸರಕಾರ ಪತನಗೊಂಡ ಮೇಲೆ ಉಪ ಚುನಾವಣೆ ಮೇಲೆ ಕಣ್ಣಿಟ್ಟಿರೋ ಕೈ ಪಡೆ ತನ್ನ ಕಾರ್ಯತಂತ್ರ ಹಾಗೂ ಪಕ್ಷ ಬಲಪಡಿಸಲು ಮುಂದಾಗಿದೆ.
2020 ರ ಆರಂಭದಲ್ಲಿ ರಾಜ್ಯದಲ್ಲಿ ಬೈ ಎಲೆಕ್ಷನ್ ಬರಲಿದೆ. ಹೀಗಾಗಿ ಕಾಂಗ್ರೆಸ್ ಬಲವರ್ಧನೆಗೆ ಕೆಪಿಸಿಸಿಗೆ ನೂತನ ಸಾರಥಿ ಆಯ್ಕೆ ಆಗಲೇಬೇಕಿದೆ.ಏತನ್ಮಧ್ಯೆ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆಯ್ಕೆ ಆಗೋದು ಬಹುತೇಕ ಪಕ್ಕಾ ಆಗಿದೆ.
ಇನ್ನು ಕೈ ಪಡೆಯಲ್ಲಿ ಈ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಹೆಸರು ಮುಂಚೂಣಿಯಲ್ಲಿದೆ. ಹೀಗಾಗಿ ಡಿಕೆಶಿ ನೂತನ ಕೆಪಿಸಿಸಿ ಅಧ್ಯಕ್ಷರಾಗೋ ಸಾಧ್ಯತೆ ದಟ್ಟವಾಗಿದೆ.
ಕೈ ಪಡೆ ಹೈಕಮಾಂಡ್ ಸೋನಿಯಾ ಗಾಂಧಿ ಈ ಕುರಿತು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರೊಂದಿಗೆ ಫೋನ್ ನಲ್ಲಿ ಮಾತನಾಡಿರೋ ವಿಷಯ ಚರ್ಚೆಗೆ ಕಾರಣವಾಗಿದೆ.