Publish Date: Sat, 31 Aug 2019 (18:38 IST)
Updated Date: Sat, 31 Aug 2019 (18:40 IST)
ಕೇಂದ್ರ ಸರಕಾರ ಐಟಿ ಹಾಗೂ ಇಡಿ ಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗಿದೆ.
ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಇಡಿ ಮತ್ತು ಸಿಬಿಐ ದುರ್ಬಳಕೆ ಮಾಡ್ತಾ ಇದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಟೈರ್ ಸುಟ್ಟು ಪ್ರತಿಭಟಿಸಿದ ಯುವ ಕಾಂಗ್ರಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಕೇಂದ್ರ ಸರಕಾರದ ವಿರುಧ್ಧ ಧಿಕ್ಕಾರ ಕೂಗಿದ ಕೈ ಪಡೆಯ ಕಾರ್ಯಕರ್ತರು, ಚಿತ್ರದುರ್ಗದ ಜಿಲ್ಲಾಧಿಕಾರಿ ಕಛೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ರು.