'ಹರ್ ಘರ್ ತಿರಂಗಾ' ಸ್ಲೋಗನ್ ಡೋಂಗಿ ರಾಜಕೀಯ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಕಟಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಷ್ಟ್ರಧ್ವಜ ವಿಚಾರದಲ್ಲಿ ಡೋಂಗಿ ರಾಜಕೀಯ ಇರಬಾರದು ಅಂತ ಹೇಳಿದ್ದೆ. ಹಿಂದೆ RSS ನ ಕೆಲವು ರಾಷ್ಟ್ರಧ್ವಜ ಬೇಡ ಅಂದಿದ್ದರು. ನಮ್ಮ ರಾಷ್ಟ್ರಧ್ವಜ, ಸಂವಿಧಾನ, ಪ್ರಜಾಪ್ರಭುತ್ವ ವಿರೋಧ ಇತ್ತು. RSS ನವರು ನಾಗರಪುರದ ಕಚೇರಿಯ ಮೇಲೆ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆ ಎಂದು ಪ್ರಶ್ನಿಸಿದರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೂಟ ತೊರೆಯುವ ಮೂಲಕ ಒಳ್ಳೆ ಕೆಲಸ ಮಾಡಿದ್ದಾರೆ. ಯಾವ ಮನಸ್ತಾಪದಿಂದ ಅವರು ಹೊರಗೆ ಬಂದಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಅವರೊಬ್ಬ ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದವರು. ಕೋಮುವಾದಿ ಪಕ್ಷ ಬಿಟ್ಟಿದ್ದು ಒಳ್ಳೆಯದು ಎಂದರು. ರಾಜ್ಯದಲ್ಲಿ ಬಿಜೆಪಿಯ ಮುಖ್ಯಮಂತ್ರಿಯಾದವರು ಬರಲಿ ನಾಲ್ಕನೆಯವರಾದರು ಬರಲಿ ನಮಗೇನು ಸಂಬಂಧವಿಲ್ಲ. ಬಿ.ಎಸ್. ಯಡಿಯೂರಪ್ಪ ಬದಲಾವಣೆ ಬಗ್ಗೆ ನನಗೆ ಗೊತ್ತಿತ್ತು. ಅದಕ್ಕೆ ನಾನು ಈ ಹಿಂದೆ ಹೇಳಿದ್ದೆ. ಆದರೆ ಸಿಎಂ ಬಸವರಾಜ ಬೊಮ್ಮಾಯಿವರ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಬಗ್ಗೆ ಟ್ವೀಟ್ ಮಾಡಿದವರನ್ನು ಕೇಳಿ,