ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಮತ್ತು ಆಪ್ತರ ಮನೆ ಮೇಲೆ ರೇಡ್ ನಡೆಸಿದ್ದ ಐಟಿ ಅಧಿಕಾರಿಗಳು ಇದೀಗ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.
ಬರೋಬ್ಬರಿ ನಾಲ್ಕು ದಿನಗಳ ಕಾಲ ಡಿಕೆಶಿವಕುಮಾರ್ ನಿವಾಸ, ಮಾವನ ಮನೆ, ಆಪ್ತ ಜ್ಯೋತಿಷಿ ಮನೆಯಲ್ಲಿ ತಪಾಸಣೆ ನಡೆಸಿದ್ದ ಅಧಿಕಾರಿಗಳು ಭಾರೀ ಪ್ರಮಾಣದಲ್ಲಿ ದಾಖಲೆ ವಶಪಡಿಸಿಕೊಂಡಿದ್ದರು.
ಆದರೆ ಮುಂದಿನ ಎರಡು ದಿನಗಳ ಕಾಲ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಸಚಿವರು ಐಟಿ ಇಲಾಖೆಗೆ ತಿಳಿಸಿದ್ದಾರೆ ಎನ್ನಲಾಗಿದೆ. ಕಾನೂನಿಗೆ ಎಲ್ಲರೂ ತಲೆಬಾಗಲೇ ಬೇಕು. ಹೀಗಾಗಿ ಸಮನ್ಸ್ ನೀಡಿರುವ ಅಧಿಕಾರಿಗಳ ವಿಚಾರಣೆಗೆ ಹಾಜರಾಗುವುದಾಗಿ ಸಚಿವರು ತಿಳಿಸಿದ್ದಾರೆ.
ಅಪಾರ ಪ್ರಮಾಣದ ಆಸ್ತಿ ಪಾಸ್ತಿ ದೊರೆತ ಹಿನ್ನಲೆಯಲ್ಲಿ ಐಟಿ ಇಲಾಖೆ ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆಯುವ ಸಾಧ್ಯತೆಯಿದೆ. ಹೀಗಾಗದರೆ ಡಿಕೆಶಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ.