ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಗೃಹ ಸಚಿವ ಪರಮೇಶ್ವರನ್ನು ಭೇಟಿಯಾಗಿರುವುದು ಚರ್ಚೆಗೆ ಕಾರಣವಾಗಿದೆ.
ಇವರಿಬ್ಬರ ಭೇಟಿ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದು, ಆದರೆ ಅವೆಲ್ಲದಕ್ಕೆ ಇದೀಗ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿ ಡಿಕೆ ಶಿವಕುಮಾರ್ ಅವರು, ನಿಮಗೆ ರಾಜಕೀಯ ಬಿಟ್ಟು ಬೇರೆ ವಿಚಾರಗಳು ಕಾಣಿಸುವುದಿಲ್ಲವೇ?. ಜನರು ನಮ್ಮ ಮೇಲೆ ವಿಶ್ವಾಸವನ್ನಿಟ್ಟು ಅಧಿಕಾರ ಕೊಟ್ಟಿದ್ದಾರೆ, ಅವರ ಆಶೋತ್ತರಗಳನ್ನು ಈಡೇರಿಸಬೇಕು ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಅಧಿಕಾರಿಗಳು ಇಲ್ಲದೇ ಪರಮೇಶ್ವರ ಹಾಗೂ ನೀವು ಮಾತ್ರ ಒಟ್ಟಿಗೆ ಸೇರಿದ್ದೀರಿ ಎಂದು ಕೇಳಿದಾಗ, "ನಾವು 136 ಕಾಂಗ್ರೆಸ್ ಶಾಸಕರು ಒಟ್ಟಿಗೆ ಇದ್ದೇವೆ. ಇಲ್ಲಿ ಚರ್ಚೆ ಮಾಡುವಾಗ ಅಧಿಕಾರಿಗಳು ಬೇಕಾಗಿಲ್ಲ. ನಾಯಕರ ಹಿಂದೆ ಅಧಿಕಾರಿಗಳು ಬೇಕಾಗಿಲ್ಲ. ನಾವು ಆಲೋಚಿಸುತ್ತೇವೆ, ಚರ್ಚೆ ಮಾಡುತ್ತೇವೆ, ಅಭಿಪ್ರಾಯ ಕೇಳುತ್ತೇವೆ. ಮಾತನಾಡುವವರು ಹಾಗೂ ತೀರ್ಮಾನಿಸುವವರು ಒಬ್ಬರೇ ಎಂದು ಹೇಳಿದರು.
ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ದ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ತನಿಖೆ ಮಾಡುವವರು ಅವರು, ತನಿಖೆಗೆ ಒಳಗಾಗುವವರು ಕುಮಾರಸ್ವಾಮಿ ಅವರು. ಅದಕ್ಕೂ ನನಗೂ ಸಂಬಂಧವಿಲ್ಲವಎಂದು ಸ್ಪಷ್ಟಪಡಿಸಿದರು.<>