Publish Date: Sat, 03 Apr 2021 (10:28 IST)
Updated Date: Sat, 03 Apr 2021 (10:29 IST)
ಮಂಗಳೂರು : ರಾಜ್ಯದಲ್ಲಿ ಕೊರೊನಾ 2ನೇ ಅಲೆ ಅಬ್ಬರ ಹೆಚ್ಚಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಗೆ ತರಲಾಗಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು ಏರ್ ಪೋರ್ಟ್ ನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಡಿಕೆಶಿವಕುಮಾರ್, ಸರ್ಕಾರದ ಗೈಡ್ ಲೈನ್ಸ್ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶಗೊಂಡಿದ್ದಾರೆ. ಹೊಸ ಗೈಡ್ ಲೈನ್ಸ್ ಪ್ರಯೋಜನಕ್ಕೆ ಬಾರದ್ದು. ಸರ್ಕಾರಕ್ಕೆ ಪ್ರಾಕ್ಟಿಕಲ್ ಜ್ಞಾನವೇ ಇಲ್ಲ, ಎಲ್ಲರಿಗೂ ಒಂದೇ ರೂಲ್ಸ್ ಮಾಡಿ ಎಂದು ಕಿಡಿಕಾರಿದ್ದಾರೆ.