Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಡಿ ದಾಳಿಗೆ ಅಚ್ಚರಿ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್

ಇಡಿ ದಾಳಿಗೆ ಅಚ್ಚರಿ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್
bengaluru , ಶುಕ್ರವಾರ, 6 ಆಗಸ್ಟ್ 2021 (19:39 IST)

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇ.ಡಿ. ಅಧಿಕಾರಿಗಳು ಐಎಂಎ ವಿಚಾರಕ್ಕೆ ದಾಳಿ ಮಾಡಿಲ್ಲ, ಆಸ್ತಿ ವಿಚಾರವಾಗಿ ದಾಳಿ ಮಾಡಿದ್ದಾರೆ ಎಂದು ನಮ್ಮ ಶಾಸಕರಾದ ಜಮೀರ್ ಅಹಮದ್ ಹೇಳಿದ್ದಾರೆ ಎಂದರು.

'ಈ ದಾಳಿಗೂ ಐಎಂಎ ವಿಚಾರಕ್ಕೂ ಸಂಬಂಧವಿಲ್ಲ. ನನ್ನ ಆಸ್ತಿ ವಿಚಾರವಾಗಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ನಮ್ಮ ಶಾಸಕರು ಹೇಳಿದ್ದಾರೆ. ಜಮೀರ್ ಅಹಮದ್ ಖಾನ್ ಅವರು ಹಿಂದೆ ವಿಧಾನಸೌಧದಲ್ಲಿ ಮಾತನಾಡಿ ಐಎಂಎ ಪ್ರಕರಣದಲ್ಲಿ ನಷ್ಟ ಅನುಭವಿಸಿರುವ 40 ಸಾವಿರ ಜನರಿಗೂ ನ್ಯಾಯ ಒದಗಿಸಿಕೊಡಬೇಕು ಎಂದು ಹೇಳಿದ್ದರು. ಇದು ನಮ್ಮ ಪಕ್ಷದ ನಿಲುವೂ ಆಗಿದೆ ಎಂದು ಅವರು ವಿವರಿಸಿದರು.

ಆದಾಯ, ಆಸ್ತಿ ವಿಚಾರವಾಗಿ ಇ.ಡಿ. ಅಧಿಕಾರಿಗಳು ದಾಳಿ ಮಾಡಿರುವುದು ನನಗೆ ಆಶ್ಚರ್ಯ ಮೂಡಿಸಿದೆ. ಆದಾಯ ತೆರಿಗೆ ಇಲಾಖೆಗೆ ಈ ವಿಚಾರದಲ್ಲಿ ದಾಳಿ ಮಾಡುವ ಅಧಿಕಾರ ಇದೆ. ಇ.ಡಿ.ಗೆ ಹಣದ ಅವ್ಯವಹಾರದ ಬಗ್ಗೆ ತನಿಖೆ ಮಾಡುವ ಅಧಿಕಾರ ಇದೆ. ನನಗಿರುವ ಜ್ಞಾನದ ಪ್ರಕಾರ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿ ಅವರಿಗೆ ಹಣದ ಅವ್ಯವಹಾರ ನಡೆದಿದೆ ಎಂಬ ಮಾಹಿತಿ ಸಿಕ್ಕರೆ ನಂತರ ಜಾರಿ ನಿರ್ದೇಶನಾಲಯ ದಾಳಿ ಮಾಡಿ ವಿಚಾರಣೆ ನಡೆಸಬಹುದು. ಆದರೆ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಏಕಾಏಕಿ ದಾಳಿ ಮಾಡಿರುವುದು ಗೊಂದಲ ಮೂಡಿಸಿದೆ ಎಂದು ಡಿಕೆಶಿ ಹೇಳಿದರು.

ನನ್ನ ಮನೆ ಮೇಲೂ ಸಿಬಿಐ ದಾಳಿ ಮಾಡಿ ನಂತರ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ಸರ್ಕಾರದಿಂದ ಅನುಮತಿ ಪಡೆದು, ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿತು. ಇದೆಲ್ಲದಕ್ಕೂ ಒಂದು ಪ್ರಕ್ರಿಯೆ ಇದೆ. ಜಮೀರ್ ಅವರು ಬಿಡುವಾದಾಗ, ನಾನು ಅವರ ಜತೆ ಮಾತಾಡಿ ಮಾಹಿತಿ ಪಡೆಯುತ್ತೇನೆ ಎಂದು ಅವರು ನುಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದಲೇ ರಾತ್ರಿ, ವೀಕೆಂಡ್ ಕರ್ಫ್ಯೂ ಜಾರಿ: ನೂತನ ಮಾರ್ಗಸೂಚಿ ಪ್ರಕಟ