Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಐಟಿ ದಾಳಿ ವೇಳೆ ದಾಖಲೆ ಹರಿದು ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿಕೆ ಶಿವಕುಮಾರ್ ಇಂದು ಕೋರ್ಟ್ ಗೆ ಹಾಜರಾಗುವ ಸಾಧ್ಯತೆಯಿದೆ.
ಈಗಲ್ ಟನ್ ರೆಸಾರ್ಟ್ ಮೇಲೆ ಐಟಿ ದಾಳಿ ನಡೆದಾಗ ಡಿಕೆಶಿ ಕೋಟ್ಯಂತ ನಗದು ಹಣ ವ್ಯವಹಾರದ ದಾಖಲೆ ಪತ್ರಗಳನ್ನು ಹರಿದು ಹಾಕಿದ್ದರು ಎಂದು ಅವರ ಮೇಲೆ ಐಟಿ ಅಧಿಕಾರಿಗಳು ದೂರು ದಾಖಲಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಇಂದು ವಿಚಾರಣೆಗಾಗಿ ಕೋರ್ಟ್ ಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ. ಡಿಕೆಶಿ ಈಗಾಗಲೇ ಆರೋಪ ನಿರಾಕರಿಸಿದ್ದು, ಯಾವುದೇ ತನಿಖೆಗೂ ಸಿದ್ಧ ಎಂದಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ