Publish Date: Sun, 06 Aug 2023 (14:32 IST)
Updated Date: Sun, 06 Aug 2023 (14:34 IST)
ಬೆಂಗಳೂರು : ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಬಿಬಿಎಂಪಿ ಮೇಲಿನ ಹಿಡಿತ ಮತ್ತಷ್ಟು ಬಿಗಿಗೊಳಿಸಲು ಮುಂದಾಗಿದ್ದಾರೆ.
ಹೌದು 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ವಿವರವನ್ನು ದಾಖಲೆ ಪತ್ರ ಸಮೇತ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರತಿ ಕಾಮಗಾರಿಯ ಬಗ್ಗೆ 15 ಅಂಶಗಳನ್ನು ಒಳಗೊಂಡ ಪ್ರಶ್ನೆಗೆ ಉತ್ತರ ಸಹಿತ ಮಾಹಿತಿ ಕೊಡುವಂತೆ ಸೂಚನೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರು ಉಸ್ತುವಾರಿ ಸಚಿವರಾಗಿದ್ದ 2019 ರಿಂದ 2023ರ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬಿಡಿಎ, ಬಿಬಿಎಂಪಿ ಅಕ್ರಮದ ಬಗ್ಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಆರೋಪ ವಿಚಾರವಾಗಿ ಮಾತನಾಡಿದ ಅವರು ಹೆಚ್ಡಿ ಕುಮಾರಸ್ವಾಮಿ ಕೇವಲ ಮಾಧ್ಯಮಗಳ ಜೊತೆ ಮಾತನಾಡಿದರೆ ಸಾಲದು. ಈಗ ಪ್ರಧಾನ ಮಂತ್ರಿಗಳವರೆಗೂ ಹೋಗಿದ್ದಾರೆ. ಅದಕ್ಕೆ ತಕ್ಕಂತೆ ನಾನು ಉತ್ತರ ಕೊಡಬೇಕು. ನಾನು ಅದಕ್ಕೆ ತಕ್ಕಂತೆ ಉತ್ತರ ಕೊಡುತ್ತೇನೆ ಎಂದು ಹೇಳಿದರು.