ರಾಮನಗರ : ಕೊರೊನಾ ವೈರಸ್ ನಿಯಂತ್ರಣಕ್ಕೆ ಕರ್ನಾಟಕ ಬಂದ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೇಸಿಕ್ ಕಾಮನ್ ಸೆನ್ಸ್ ನಲ್ಲಿ ನಮ್ಮ ರಾಜ್ಯ ಸರ್ಕಾರ ಎಡವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲಬಾರಿ ಕನಕಪುರಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕೊರೊನಾ ವೈರಸ್ ತಡೆಗಟ್ಟಲು ಒಂದು ವಾರ ಕರ್ನಾಟಕ ಸ್ಥಬ್ದಗೊಳಿಸಿರುವುದು ಸುಮ್ಮನೆ ಪ್ರಚಾರಕ್ಕೋಸ್ಕರ. ಕೊರೊನಾ ವೈರಸ್ ತಡೆಗಟ್ಟುವ ವಿಚಾರದಲ್ಲಿ ರಾಜ್ಯ ಸರ್ಕಾರ ಮೊದಲು ಮೆಡಿಕಲ್ ಕಾಲೇಜುಗಳ ಚೇರ್ಮನ್ ಗಳ, ಆಸ್ಪತ್ರೆ ಹೆಡ್ ಗಳನ್ನು ಕರೆದು ಏನ್ ಕೆಲಸ ಮಾಡಬೇಕೋ ಅದನ್ನು ಮಾಡಬೇಕು ಎಂದು ತಿಳಿಸಿದ್ದಾರೆ.
ಹೊರಗಡೆಯಿಂದ ಬರುವವರನ್ನು ಹೇಗೆ ನಿಲ್ಲಿಸಬೇಕು. ಅವರನ್ನು ಹೇಗೆ ಚೆಕಫ್ ಮಾಡಬೇಕೋ ಅದನ್ನು ಮಾಡಿ. ಅದನ್ನ ಬಿಟ್ಟು ಸುಮ್ಮನೇ ಹಳ್ಳಿಯಲ್ಲಿ ವಾಸ್ತವ್ಯ ಹೂಡುವುದರಿಂದ ಏನು ಪ್ರಯೋಜನವಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲುಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.