ರಾಜ್ಯ ಸರಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೊರೊನಾ ಹೆಣದ ಮೇಲೆ ಹಣ ಮಾಡುವುದಕ್ಕೆ ಅಂತ ಸರಕಾರ ಹೊರಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ, ಕೋವಿಡ್ ಸೋಂಕಿನ ಜೊತೆಗೆ ಭ್ರಷ್ಟಾಚಾರದ ಸೋಂಕನ್ನು ಹಂಚೋಕೆ ಸರಕಾರ ಹೊರಟಿದೆ ಎಂದು ಟೀಕೆ ಮಾಡಿದ್ದಾರೆ.