Publish Date: Fri, 22 Nov 2019 (06:39 IST)
Updated Date: Fri, 22 Nov 2019 (06:44 IST)
ಹುಬ್ಬಳ್ಳಿ : ಅನರ್ಹ ಶಾಸಕರು ಬಿಜೆಪಿ ನಾಯಕರ ಚಡ್ಡಿ, ಪ್ಯಾಂಟು ಹರಿಯುತ್ತಾರೆ ಎಂದು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ನನ್ನ ಸ್ನೇಹಿತರಾದ 17 ಮಂದಿ ಅನರ್ಹ ಶಾಸಕರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಗಿಫ್ಟ್ ನೀಡಿದ್ದಾರೆ. ಅವರು ನಮ್ಮನ್ನೇ ಬಿಟ್ಟಿಲ್ಲ, ಇನ್ನು ಬಿಜೆಪಿ ನಾಯಕರನ್ನ ಬಿಡುತ್ತಾರಾ. ಅವರು ಬಿಜೆಪಿ ನಾಯಕರ ಚಡ್ಡಿ, ಪ್ಯಾಂಟು, ಜೇಬನ್ನು ಹರಿಯುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಹಾಗೇ ಮಾತು ಮುಂದುವರಿಸಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ದಿನೇಶ್ ಗುಂಡೂರಾವ್ ಅಧ್ಯಕ್ಷರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದಾರೆ. ನಾನು ಪಕ್ಷದ ಕೆಲಸವನ್ನು ಮಾಡಬೇಕಿದೆ ಎಂದು ತಿಳಿಸಿದ್ದಾರೆ.