ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತಂತೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕಾಗಿ ಅರ್ಜಿ ಹಾಕಿಕೊಮಡು ನಾನು ಎಲ್ಲಿಯೂ ಹೋಗಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಅಧ್ಯಕ್ಷರ ಆಯ್ಕೆ ಹೈಕಮಾಂಡ್`ಗೆ ಬಿಟ್ಟ ವಿಚಾರ. ಕೆಲವರು ಮುಂದೆ ಚೆನ್ನಾಗಿಯೇ ಮಾತನಾಡುತ್ತಾರೆ. ಹಿಂದೆ ತೆಗಳುತ್ತಾರೆ ಎನ್ನುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕಾಗಿ ನಾನು ಮಾಡಬೇಕಾದ ಕೆಲಸ ಮಾಡುತ್ತಿದ್ದೇನೆ, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರ ವರಿಷ್ಠರಿಗೆ ಬಿಟ್ಟದ್ದು ಎಂದು ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಉಪಚುನಾವಣೆ ಬಳಿಕ ಕಾಂಗ್ರೆಸ್`ನಲ್ಲಿ ಹಲವು ಬದಲಾವಣೆಗಳಾಗುವ ಸಾಧ್ಯತೆ ಇದೆ. ಡಿ.ಕೆ. ಶಿವಕುಮಾರ್`ಗೆ ಕೆಪಿಸಿಸಿ ಅಧ್ಯಕ್ಷಗಾದಿ ಸಿಗಲಿದೆ ಎಂಬ ಮಾತುಗಳೂ ಕೇಳಿಬಂದಿದ್ದವು. ಈ ಬಗ್ಗೆ ಕೇಳಿದ ಪ್ರಶ್ನೆಗೆ ಡಿ.ಕೆ. ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.